ಪರಿಶಿಷ್ಟ ಜಾತಿ ಸಮೀಕ್ಷೆ: ಆನ್ ಲೈನ್ ನಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸುವುದು ಹೇಗೆ?

ಬಿಬಿಎಂಪಿ ವ್ಯಾಪ್ತಿಯ ನಾಗರಿಕರಿಗೆ ಪರಿಶಿಷ್ಟ ಜಾತಿ ಸಮೀಕ್ಷೆ ಕುರಿತು ಸ್ಪಷ್ಟೀಕರಣ ನೀಡಿದೆ. ಆ ಸ್ಪಷ್ಟೀಕರಣ ಇಲ್ಲಿ ನೀಡಲಾಗಿದೆ.
ಕರ್ನಾಟಕ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ, ಬೆಂಗಳೂರು ನಗರದಾದ್ಯಂತ ಪರಿಶಿಷ್ಟ ಜಾತಿ(SC) ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದೆ. ಈ ಸಮೀಕ್ಷೆಯು ಪ್ರತಿ ಅರ್ಹ ಕುಟುಂಬವನ್ನು ಒಳಗೊಂಡಿದೆಯೇ ಎಂದು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದೆ. ಸಮೀಕ್ಷಾ ತಂಡಗಳು ನಿವಾಸಿಗಳೊಂದಿಗೆ ಸಂವಹನ ನಡೆಸದೆ ಮನೆಗಳ ಮೇಲೆ ಸಮೀಕ್ಷೆಯ ಸ್ಟಿಕ್ಕರ್ ಗಳನ್ನು ಅಂಟಿಸಿವೆ ಎಂದು ಕೆಲವು ನಿವಾಸಿಗಳು, ಸಾಮಾಜಿಕ ಮಾಧ್ಯಮ, ಟಿವಿ ಸುದ್ದಿ ವಾಹಿನಿಗಳು ಮತ್ತು ನಮ್ಮ ಸಹಾಯವಾಣಿಯಲ್ಲಿ ಕಳವಳ ವ್ಯಕ್ತಪಡಿಸಿರುವುದನ್ನು ಗಮನಿಸಲಾಗಿದೆ. ಈ ಕಳವಳಗಳನ್ನು ನಿವಾರಿಸಲು ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ಕೆಳಗಿನ ಅಂಶಗಳ ಮೂಲಕ ಸ್ಪಷ್ಟಪಡಿಸಲು ಬಯಸುತ್ತೇವೆ:
ಸ್ಟಿಕ್ಕರ್ ಅಂಟಿಸುವ ಉದ್ದೇಶ: ಸಮೀಕ್ಷಾ ತಂಡಗಳು ಪ್ರತಿ ಮನೆಗೆ ಭೇಟಿ ನೀಡಿರುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ದೃಢೀಕರಿಸುವ ಉದ್ದೇಶದಿಂದ ಮನೆ–ಮನೆಗೆ ಸ್ಟಿಕ್ಕರ್ ಗಳನ್ನು ಅಂಟಿಸುವುದು ಸಮೀಕ್ಷಾ ಪ್ರಕ್ರಿಯೆಯ ಒಂದು ಭಾಗವಾಗಿದೆ. ಇದರಿಂದ ಯಾವುದೇ ಪರಿಶಿಷ್ಟ ಜಾತಿ ಕುಟುಂಬವು ಸಮೀಕ್ಷೆಯಿಂದ ಹೊರಗುಳಿಯದಂತೆ ಖಚಿತಪಡಿಸುತ್ತದೆ.
ಸಂವಹನದ ಅಗತ್ಯತೆ: ಮನೆಯ ಸದಸ್ಯರೊಂದಿಗೆ ಸಂವಹನ ನಡೆಸದೆ ಸ್ಟಿಕ್ಕರ್ ಗಳನ್ನು ಅಂಟಿಸಬಾರದು ಎಂದು ಸಮೀಕ್ಷಾ ತಂಡಗಳಿಗೆ ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ. ಆದಾಗ್ಯೂ, ಕೆಲ ಸಂದರ್ಭಗಳಲ್ಲಿ ಇದನ್ನು ಅನುಸರಿಸದಿರಬಹುದು ಎಂದು ನಾವು ಒಪ್ಪಿಕೊಳ್ಳುತ್ತೇವೆ. ಸಮೀಕ್ಷೆ ನಡೆಸಿದ ಲಕ್ಷಾಂತರ ಮನೆಗಳಲ್ಲಿ, ಕೆಲವು ಮನೆಗಳು ನಮ್ಮ ಸಮೀಕ್ಷಕರಿಂದ ತಪ್ಪಿಹೋಗಿರಬಹುದು.
ಸಂವಹನ ನಡೆಯದಿದ್ದಲ್ಲಿ ಏನು ಮಾಡಬೇಕು?: ಯಾವುದೇ ಸಂವಹನವಿಲ್ಲದೆ ಸ್ಟಿಕ್ಕರ್ ಅಂಟಿಸಿದ್ದರೆ, ಸಹಾಯವಾಣಿ ಸಂಖ್ಯೆ 9481359000ಗೆ ಕರೆ ಮಾಡಿ(ಸಂಖ್ಯೆಯು ಸ್ಟಿಕ್ಕರ್ ನ ಮೇಲೆ ಮುದ್ರಿತವಾಗಿರುತ್ತದೆ) ಸಮೀಕ್ಷೆಯನ್ನು ಸರಿಯಾಗಿ ಪೂರ್ಣಗೊಳಿಸಲು ಅಗತ್ಯ ವ್ಯವಸ್ಥೆ ಮಾಡುತ್ತೇವೆ.
ಸ್ವಯಂ ಘೋಷಣೆಯ ಆಯ್ಕೆ: ಇನ್ನು ಸಮೀಕ್ಷೆಗೆ ಒಳಪಡದ ಯಾವುದೇ ಪರಿಶಿಷ್ಟ ಜಾತಿ ಕುಟುಂಬವು ಆನ್ ಲೈನ್‌ನಲ್ಲಿ ಸ್ವಯಂ ಘೋಷಣಾ ಫಾರ್ಮ್ ಅನ್ನು ಭರ್ತಿ ಮಾಡುವ ಮೂಲಕ ಸಮೀಕ್ಷೆಯಲ್ಲಿ ಭಾಗವಹಿಸಬಹುದು. ಲಿಂಕ್ ಅನ್ನು ಪ್ರವೇಶಿಸಲು ಮತ್ತು ನಿಮ್ಮ ಮಾಹಿತಿಯನ್ನು ಸಲ್ಲಿಸಲು ಸ್ಟಿಕ್ಕರ್‌ನಲ್ಲಿರುವ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ.
ಆನ್ ಲೈನ್ ಸ್ವಯಂ ಘೋಷಣಾ ಪೋರ್ಟಲ್:
https://schedulecastesurvey.karnataka.gov.in/selfdeclaration/
ಪರಿಶಿಷ್ಟ ಜಾತಿ ಸಮೀಕ್ಷಾ ಸಹಾಯವಾಣಿ: 9481359000
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: