ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ  ಜೆಇ - Mahanayaka

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ  ಜೆಇ

04/07/2025

ಚಿಕ್ಕಮಗಳೂರು:   ಲಂಚ ಸ್ವೀಕರಿಸುವಾಗ ಮೆಸ್ಕಾಂ  ಜೆಇ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ  ಕಡೂರು ಪಟ್ಟಣದಲ್ಲಿ ಮೆಸ್ಕಾಂ ಕಚೇರಿಯಲ್ಲಿ ನಡೆದಿದೆ.

ಮೆಸ್ಕಾಂ  ಜೆಇ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಬಿಲ್ ಪಾಸ್ ಮಾಡಲು 9,000 ರೂ. ಲಂಚದ ಬೇಡಿಕೆ ಇಟ್ಟಿದ್ದ ಜೆಇ ಇದೀಗ ಲೋಕಾಯುಕ್ತರ ಅತಿಥಿಯಾಗಿದ್ದಾರೆ.

ವಿದ್ಯುತ್ ಗುತ್ತಿಗೆದಾರ ದೇವರಾಜ್ ಅವರಿಗೆ ಗಂಗಾ ಕಲ್ಯಾಣ ಯೋಜನೆಯ ಬಿಲ್ ಪಾಸ್ ಮಾಡಲು ಪ್ರಶಾಂತ್  9,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಕಡೂರು ಪಟ್ಟಣದಲ್ಲಿ ಮೆಸ್ಕಾಂ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿರುವ ವೇಳೆಯೇ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ