ನೀರಿನ ಟ್ಯಾಂಕ್ ಮೀಟರ್ ಬರೆಯುವ ವೇಳೆ ವಿದ್ಯುತ್ ಶಾಕ್: ಮೆಸ್ಕಾಂ ಸಿಬ್ಬಂದಿ ಸ್ಥಿತಿ ಗಂಭೀರ

08/07/2025
ಚಿಕ್ಕಮಗಳೂರು(Mahanayaka): ನೀರಿನ ಟ್ಯಾಂಕ್ ಮೀಟರ್ ಬರೆಯುವ ವೇಳೆ ವಿದ್ಯುತ್ ಶಾಕ್ ತಗುಲಿ ಮೆಸ್ಕಾಂ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ನಡೆದಿದೆ.
ವೆಂಕಟೇಶ್ ವಿದ್ಯುತ್ ಶಾಕ್ ನಿಂದ ಗಂಭೀರ ಸ್ಥಿತಿಯಲ್ಲಿದ್ದಾರೆ. ಟ್ಯಾಂಕರ್ ಮೋಟರ್ ಬಳಿ ಗ್ರೌಂಡಿಂಗ್ ನಿಂದ ವಿದ್ಯುತ್ ಶಾಕ್ ಹೊಡೆದಿದ್ದು, ಪರಿಣಾವಾಗಿ ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ.
ವೆಂಕಟೇಶ್ ಅವರನ್ನು ಮೊದಲು ಕಳಸ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD