ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆಯ ಮೇಲೆ ಗ್ಯಾಂಗ್ ರೇಪ್: ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು(Mahanayaka): ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹಣ, ಪೀಠೋಪಕರಣ ದೋಚಿರುವ ಘಟನೆ ದೊಡ್ಡನಾಗಮಂಗಲದ ಲೇಔಟ್ನಲ್ಲಿರುವ ಮನೆಯೊಂದರಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧ ರಘು, ಕೆಂಚೇಗೌಡ ಹಾಗೂ ಮಾದೇಶ್ ಎಂಬ ಮೂವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿ, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಜುಲೈ 7ರಂದು ಸಂಜೆ ಈ ಕೃತ್ಯ ನಡೆದಿದೆ. ಬಂಧಿತರೆಲ್ಲರೂ ಹೆಬ್ಬಗೋಡಿ ಸುತ್ತಮುತ್ತಲಿನ ನಿವಾಸಿಗಳಾಗಿದ್ದಾರೆ. ಘಟನೆ ನಡೆದ ದಿನ ಸಂತ್ರಸ್ತೆ ತನ್ನ ಸ್ನೇಹಿತನ ಮನೆಗೆ ಬಂದಿದ್ದಾರೆ. ಈ ವೇಳೆ ಆರೋಪಿಗಳು ಇಬ್ಬರನ್ನೂ ಹಿಂಬಾಲಿಸಿ ಪೊಲೀಸರಿಗೆ ದೂರು ನೀಡುವುದಾಗಿ ಮಹಿಳೆ ಮತ್ತು ಆಕೆಯ ಸ್ನೇಹಿತನನ್ನು ಬೆದರಿಸಿದ್ದಾರೆ. ಬಳಿಕ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಬಳಿಕ ಬೆಟ್ಟಿಂಗ್ ಆ್ಯಪ್ ವ್ಯಾಲೆಟ್ ವೊಂದಕ್ಕೆ ಹಣ ಹಾಕಿಸಿಕೊಂಡಿದ್ಧಾರೆ. ಅಲ್ಲದೆ, ಮನೆಯಲ್ಲಿದ್ದ ಫ್ರಿಡ್ಜ್ ಹಾಗೂ ವಾಷಿಂಗ್ ಮಷಿನ್, ಎರಡು ಮೊಬೈಲ್ ಸೇರಿದಂತೆ ಮನೆಯಲ್ಲಿದ್ದ ಪೀಠೋಪಕರಣ ದೋಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರು ದಾಖಲಾದ ಕೂಡಲೇ ಪೊಲೀಸರು ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಿದ್ದು, ಈ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಆರೋಪಿಗಳ ವಿರುದ್ಧ ಹಿಂದೆ ಈ ರೀತಿಯ ಪ್ರಕರಣಗಳು ದಾಖಲಾಗಿವೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD