ವಸತಿ ಶಾಲೆಗೆ ದಾಖಲಿಸಿದ್ದಕ್ಕೆ ನೊಂದು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು! - Mahanayaka
12:34 AM Friday 12 - December 2025

ವಸತಿ ಶಾಲೆಗೆ ದಾಖಲಿಸಿದ್ದಕ್ಕೆ ನೊಂದು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

kalaburagi
10/07/2025

ಕಲಬುರಗಿ(Mahanayaka): ವಸತಿ ಶಾಲೆಗೆ ದಾಖಲಿಸಿದ್ದರಿಂದ ನೊಂದು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ(kalaburagi) ಜಿಲ್ಲೆಯ ಸೇಡಂ ತಾಲೂಕಿನ ಮುಧೋಳದಲ್ಲಿ ನಡೆದಿದೆ.

ಕಲಬುರಗಿ ತಾಲೂಕಿನ ಪಾಣೆಗಾಂವ್​ ಗ್ರಾಮದ ನಾರಾಯಣ ರಾಠೋಡ್ (13) ಮೃತಪಟ್ಟ ಬಾಲಕ. ವಸತಿ ಶಾಲೆಗೆ  ಸೇರಲು ಇಷ್ಟವಿಲ್ಲ,  ಸೇರಿಸಿದರೆ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಾಲಕ ಹೇಳಿದ್ದ ಎನ್ನಲಾಗಿದೆ.

ಪೋಷಕರು ಬಾಲಕನ ಮನವೊಲಿಸಿ ಮುಧೋಳದ ಇಂದಿರಾ ಗಾಂಧಿ ವಸತಿ ಶಾಲೆಗೆ ದಾಖಲಿಸಿದ್ದರು. ಆದರೆ ಗುರುವಾರ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ತಾಯಿಯನ್ನು ಬಿಟ್ಟಿರಲಾಗದೇ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ 15 ದಿನಗಳ ಹಿಂದೆಯೂ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ.

ಘಟನೆ ಸಂಬಂಧ ಸೇಡಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ