ಚಾರ್ಮಾಡಿ ಘಾಟಿ ತಿರುವಿನಲ್ಲಿ ಲಾರಿ ಪಲ್ಟಿ - Mahanayaka

ಚಾರ್ಮಾಡಿ ಘಾಟಿ ತಿರುವಿನಲ್ಲಿ ಲಾರಿ ಪಲ್ಟಿ

charmadi ghat
10/07/2025

ಕೊಟ್ಟಿಗೆಹಾರ:  ಚಾರ್ಮಾಡಿ ಘಾಟಿಯೊಂದನೇ ತಿರುವಿನ ಬಳಿ ಗುರುವಾರ ಮುಂಜಾನೆ ಮರ ಸಾಗಾಟದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.

ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್  ಸಣ್ಣ ಪುಟ್ಟ ಪೆಟ್ಟಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಸುಮಾರು ಒಂದು ಗಂಟೆಯ ಕಾಲ ಘಾಟಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿತ್ತು.

ಬೆಳ್ತಂಗಡಿ ಟ್ರಾಫಿಕ್ ಠಾಣೆಯ ಪೊಲೀಸರು ಸ್ಥಳಕ್ಕೆ ತಕ್ಷಣ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ