ಲಂಚಕ್ಕೆ ಬೇಡಿಕೆ: ಮಂಗಳೂರಿನಲ್ಲಿ ಐವರು ಪೊಲೀಸರ ಅಮಾನತು

11/07/2025
ಮಂಗಳೂರು: ಲಂಚಕ್ಕೆ ಬೇಡಿಕೆಯಿಟ್ಟ ಇಬ್ಬರು ಪೊಲೀಸರು ಹಾಗೂ ಮಾಹಿತಿ ಮರೆಮಾಚಿದ ಮೂವರು ಪೊಲೀಸರು ಸೇರಿದಂತೆ ಒಟ್ಟು 5 ಮಂದಿ ಪೊಲೀಸರನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅಮಾನತುಗೊಳಿಸಿದ್ದಾರೆ.
ವಾಹನ ಪರವಾನಗಿ ಮರಳಿ ಪಡೆಯಲು 50 ಸಾವಿರ ರೂಪಾಯಿಗೆ ಬೇಡಿಕೆ ಇರಿಸಲಾಗಿತ್ತು. ಈ ಪ್ರಕರಣದಲ್ಲಿ ತಸ್ವೀಂ ಹಾಗೂ ಸಹಕರಿಸಿದ್ದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ.
ತಸ್ಲಿಂ ಮತ್ತು ವಿನೋದ್ ಲಂಚಕ್ಕೆ ಬೇಡಿಕೆಯಿಟ್ಟಿರುವ ವಿಚಾರ ತಿಳಿದು ಕೂಡ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೇ ಮೌನವಹಿಸಿದ್ದ ಇತರ ಮೂವರನ್ನೂ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD