ಆಟೋದಲ್ಲಿ ಹೋಗುತ್ತಿದ್ದವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಮೈಸೂರು: ಆಟೋದಲ್ಲಿ ಹೋಗುತ್ತಿದ್ದ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ವ್ಯಕ್ತಿಯ ಮೇಲೆ ನಾಲ್ವರ ತಂಡ ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಗರದ ಅಗ್ರಹಾರ ಬಳಿಯ ರಾಮಾನುಜ ರಸ್ತೆಯಲ್ಲಿ ನಡೆದಿದೆ.
ಗುರುವಾರ ರಾತ್ರಿ 10 ಗಂಟೆಗೆ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ರಾಜನ್(38) ಪತ್ನಿ ಕುಮುದಾ, ವಿಶಾಲಾಕ್ಷಿ, ರೇಣುಕಮ್ಮ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ಒಬ್ಬನ ಸ್ಥಿತಿ ಗಂಭೀರವಾಗಿದೆ.
ಒಂದು ವರ್ಷಗಳ ಹಿಂದೆ ರಾಜನ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಗುರುವಾರ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ಮಾತುಕತೆಗೆ ಹೋಗಿ ಆಟೋದಲ್ಲಿ ಬರುತ್ತಿದ್ದ ವೇಳೆ ಆಟೋದಲ್ಲಿದ್ದ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ರಾಮ, ಸೌಮ್ಯ, ಅಬ್ಬಯ್ಯ, ಪ್ರಸಾದ್ ಎಂಬವರು ಲಾಂಗ್, ಮಚ್ಚುಗಳಿಂದ ಆಟೋದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧ ಕೆ.ಆರ್. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD