ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 13ರ ಬಾಲಕ

ಕಾರವಾರ: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ನೊಂದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮಂಗಳವಾಡ ಗ್ರಾಮದಲ್ಲಿ ನಡೆದಿದೆ.
ಓಂ ಕದಂ (13) ಆತ್ಮಹತ್ಯೆಗೆ ಶರಣಾಗಿರುವ ಬಾಲಕನಾಗಿದ್ದಾನೆ. ಹಳಿಯಾಳದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈತ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಮನೆಯಲ್ಲಿ ಪ್ರತಿದಿನ ಹೆಚ್ಚು ಮೊಬೈಲ್ ನೋಡುತ್ತಾ ಕಾಲಕಳೆಯುತ್ತಿದ್ದ ಮಗನಿಗೆ ತಂದೆ ಮನೋಹರ್ ಮೊಬೈಲ್ ನೋಡದಂತೆ ಬುದ್ದಿವಾದ ಹೇಳುತ್ತಿದ್ದರು. ಮಾತು ಕೇಳದೇ ಓಂ ಕದಂ ಹಠಕ್ಕೆ ಬಿದ್ದು ಮೊಬೈಲ್ ನೋಡುತ್ತಿದ್ದ ಎನ್ನಲಾಗಿದೆ.
ಮಂಗಳವಾರ ರಾತ್ರಿ ಮೊಬೈಲ್ ನೋಡುತ್ತಿದ್ದ ಮಗನಿಗೆ ಗದರಿಸಿ ಮೊಬೈಲ್ ಕಸಿದುಕೊಂಡು ಓದಿಕೊಳ್ಳುವಂತೆ ತಂದೆ ಮನೋಹರ್ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ಓಂ ಕದಂ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಕ್ಷಣ ಹಳಿಯಾಳದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರೂ ಕಾಪಾಡಲು ಸಾಧ್ಯವಾಗಲಿಲ್ಲ. ಘಟನೆ ಸಂಬಂಧ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: