ಒಂದೂವರೆ ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಲೈನ್ ಮ್ಯಾನ್ ವಿದ್ಯುತ್ ಶಾಕ್ ಗೆ ಬಲಿ

ಚಿಕ್ಕಮಗಳೂರು: ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಲೈನ್ ಮ್ಯಾನ್ ಕರೆಂಟ್ ಶಾಕ್ ನಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪದ ಹೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮೃತನನ್ನ 26 ವರ್ಷದ ಪ್ರವೀಣ್ ಎಂದು ಗುರುತಿಸಲಾಗಿದೆ. ಮೂಲತಃ ಬಾಗಲಕೋಟೆಯ ಪ್ರವೀಣ್ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೆಸ್ಕಾಂ ನಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು.
ಇಂದು ಮಧ್ಯಾಹ್ನ ಹೊನ್ನೆಕೊಪ್ಪ ಗ್ರಾಮದಲ್ಲಿ ಕಂಬ ಹತ್ತಿ ಫ್ಯೂಸ್ ಹಾಕಿ ವಿದ್ಯುತ್ ಲೈನ್ ದುರಸ್ಥಿ ವೇಳೆ ವಿದ್ಯುತ್ ಶಾಕ್ ನಿಂದ ತೀವ್ರ ಅಸ್ವಸ್ತಗೊಂಡಿದ್ದರು.
ಕಂಬದಿಂದ ಬಿದ್ದು ಅಸ್ವಸ್ಥನಾಗಿ ಒದ್ದಾಡುತ್ತಿದ್ದ ಪ್ರವೀಣ್ ನನ್ನ ಸ್ಥಳಿಯರು ಹಾಗೂ ಇತರೇ ಸಿಬ್ಬಂದಿಗಳು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ವಿದ್ಯುತ್ ಶಾಕ್ ನಿಂದ ಅಸ್ವಸ್ಥರಾಗಿದ್ದ ಪ್ರವೀಣ್ ಆಸ್ಪತ್ರೆಗೆ ಬರುವ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: