ಧರ್ಮಸ್ಥಳ ಪ್ರಕರಣ ಎಸ್ ಐಟಿ ತನಿಖೆಗೆ ಆದೇಶ: ಡಿಜಿಟಲ್ ಮಾಧ್ಯಮಗಳ ಹೋರಾಟಕ್ಕೆ ಸಿಕ್ಕಿತು ಜಯ - Mahanayaka
6:29 AM Tuesday 16 - September 2025

ಧರ್ಮಸ್ಥಳ ಪ್ರಕರಣ ಎಸ್ ಐಟಿ ತನಿಖೆಗೆ ಆದೇಶ: ಡಿಜಿಟಲ್ ಮಾಧ್ಯಮಗಳ ಹೋರಾಟಕ್ಕೆ ಸಿಕ್ಕಿತು ಜಯ

dharmasthala case
20/07/2025

ಬೆಂಗಳೂರು: ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿರುವ ಪ್ರಕರಣವನ್ನು ವಿಶೇಷ ತನಿಖಾ ತಂಡ(SIT) ತನಿಖೆಗೆ ರಚಿಸಿ ಆದೇಶಿಸಿದೆ.


Provided by

ಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸಿರುವುದು ರಾಜ್ಯದ, ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಡಿಜಿಟಲ್ ಮಾಧ್ಯಮಗಳ ನಿರಂತರ ಪರಿಶ್ರಮದ ಹೋರಾಟಕ್ಕೆ ದೊರೆತ ಜಯವಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ,  ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ,  ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ ಎಂದು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ