ಬಂಟ್ವಾಳ ಪುರಸಭೆ ಸದಸ್ಯರಾದ ಜನಾರ್ದನ ಚೆಂಡ್ತಿಮಾರ್ ನಿಧನ - Mahanayaka

ಬಂಟ್ವಾಳ ಪುರಸಭೆ ಸದಸ್ಯರಾದ ಜನಾರ್ದನ ಚೆಂಡ್ತಿಮಾರ್ ನಿಧನ

janardhan
21/07/2025

ಬಂಟ್ವಾಳ: ಪುರಸಭಾ ಸದಸ್ಯ ದಲಿತ ಮುಖಂಡ ಜನಾರ್ದನ ಚೆಂಡ್ತಿಮಾರ್(55) ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ.


Provided by

ಮಾಜಿ ಸಚಿವ ಬಿ.ರಮಾನಾಥ ರೈ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಜನಾರ್ಧನ್ ಅವರು ಇತ್ತೀಚೆಗೆ ಕೆಲವು ಸಮಯಗಳಿಂದ ಅನಾರೋಗ್ಯಕ್ಕೀಡಾಗಿದ್ದರು.

ಮೃತರು ಪತ್ನಿ, ಓರ್ವ ಪುತ್ರ ಸಹಿತ ಅಪಾರ ಬಂಧು—ಬಳಗವನ್ನು ಅಗಲಿದ್ದಾರೆ. ಇವರ ಅಗಲಿಕೆಗೆ ಕಾಂಗ್ರೆಸ್ ಪಕ್ಷದ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಪರಿಶಿಷ್ಟ ಜಾತಿಯ ಯುವಕರಿಗೆ ಮಾರ್ಗದರ್ಶಕರು, ದ.ಕ.ಜಿಲ್ಲಾ ಕಾಂಗ್ರೆಸಿನ ಪ್ರಧಾನ ಕಾರ್ಯದರ್ಶಿಗಳಾಗಿ ಅನೇಕ ಜವಾಬ್ದಾರಿ ಸ್ಥಾನವನ್ನು ಸಮಾಜಕ್ಕಾಗಿ ನೀಡಿದ  ಜನಾರ್ದನ ಚೆಂಡ್ತಿಮಾರ್ ಇಂದು ವಿಧಿವಶರಾಗಿದ್ದಾರೆ. ಇವರ ಸಾವಿನ ಸುದ್ದಿ ನಮಗೆಲ್ಲ ತುಂಬಲಾರದ ನಷ್ಟ ಜೊತೆಗೆ ತೀವ್ರ ನೋವು ಆಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ  ದಿನೇಶ್ ಮೂಳೂರು ಮಹಾನಾಯಕಕ್ಕೆ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ