ಡೆತ್ ನೋಟ್ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ…!

26/07/2025
ಚಿಕ್ಕಮಗಳೂರು: ಗುಪ್ತಚರ ಇಲಾಖೆಯ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ.
ಮೃತನನ್ನ 28 ವರ್ಷದ ಮಧು ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಮಧು ಕಳೆದೊಂದು ವರ್ಷದಿಂದ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಕಳೆದ ಒಂದು ತಿಂಗಳ ಹಿಂದಷ್ಟೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು. ಆದರೆ, ತಮ್ಮ ಮನೆಯಲ್ಲೇ ಅನಾರೋಗ್ಯದ ಸಮಸ್ಯೆ ಎಂದು ಚೀಟಿ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD