ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಗಂಭೀರ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ಹತ್ತಿಕೊಂಡಿದ್ದ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕೆಎಂಸಿ ಆಸ್ಪತ್ರೆಯಲ್ಲಿ ನಡೆದಿದೆ.
ಜಿ.24ರಂದು ಈ ದುರ್ಘಟನೆ ನಡೆದಿತ್ತು. ಘಟನೆಯಲ್ಲಿ ಶಿಕ್ಷಕಿ ಗಂಗಮ್ಮ ಸೇರಿದಂತೆ ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದರು. ಇದೀಗ ಗಂಗಮ್ಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಬೆಂಕಿ ಹತ್ತಿಕೊಂಡ ಪರಿಣಾಮ ಶಿಕ್ಷಕಿ ಶೇಕಡಾ 65ರಷ್ಟು ಸುಟ್ಟ ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ.
ಸದ್ಯ ಉಳಿದ ಮೂವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಹುಬ್ಬಳ್ಳಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD