ಬೆಳ್ತಂಗಡಿಯ ಎಸ್ ಐಟಿ ಕಚೇರಿ ಪರಿಶೀಲನೆ ನಡೆಸಿದ ಪ್ರಣಬ್ ಕುಮಾರ್ ಮೊಹಾಂತಿ - Mahanayaka

ಬೆಳ್ತಂಗಡಿಯ ಎಸ್ ಐಟಿ ಕಚೇರಿ ಪರಿಶೀಲನೆ ನಡೆಸಿದ ಪ್ರಣಬ್ ಕುಮಾರ್ ಮೊಹಾಂತಿ

dharmastala
27/07/2025


Provided by

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣದ ತನಿಖೆಯನ್ನು ಎಸ್ ಐಟಿ ಕೈಗೆತ್ತಿಕೊಂಡಿದೆ. ಈ ನಡುವೆ ಭಾನುವಾರ ಎಸ್ ಐಟಿ ಮುಖ್ಯಸ್ಥ ಪ್ರಣಬ್ ಕುಮಾರ್ ಮೊಹಾಂತಿ ಬೆಳ್ತಂಗಡಿಗೆ ಆಗಮಿಸಿದ್ದಾರೆ.

ಭಾನುವಾರ ಸಂಜೆ 6 ಗಂಟೆಯ ಸುಮಾರಿಗೆ  ಮಂಗಳೂರಿನಿಂದ ನೇರವಾಗಿ ಬೆಳ್ತಂಗಡಿಗೆ ಆಗಮಿಸಿದ ಅವರು, ಬೆಳ್ತಂಗಡಿ ಠಾಣೆಯ ಬಳಿಯ ಹೊಸ ಎಸ್ ಐಟಿ ಕಚೇರಿಗೆ ಆಗಮಿಸಿ, ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಎಸ್.ಐ.ಟಿ ತಂಡದ ಹಿರಿಯ ಅಧಿಕಾರಿಗಳಾದ ಅನುಚೇತ್ ಐಪಿಎಸ್, ಸಿ.ಎ.ಸೈಮನ್ ಹಾಗೂ ಇತರ ಅಧಿಕಾರಿಗಳು ಜೊತೆಗಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ