ಧರ್ಮಸ್ಥಳ: ಉತ್ಖನನ ವೇಳೆ ಕೆಂಪು ಬಣ್ಣದ ರವಿಕೆ, ಪಾನ್ ಕಾರ್ಡ್, ಎಟಿಎಂ ಕಾರ್ಡ್ ಪತ್ತೆ

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಇದೊಂದು ದೊಡ್ಡ ಟ್ವಿಸ್ಟ್ ಅಂತನೇ ಹೇಳಬಹುದು, ಮೃತದೇಹ ಹೊರ ತೆಗೆಯುವ ಕಾರ್ಯಾಚರಣೆ ಸಂದರ್ಭದಲ್ಲಿ ಪಾಯಿಂಟ್ 1ರಲ್ಲಿ ಮಹತ್ವದ ಸಾಕ್ಷಿಗಳು ಪತ್ತೆಯಾಗಿವೆ.
ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ತಾಯಿ ಸುಜಾತಾ ಭಟ್ ಅವರ ವಕೀಲರಾದ ಮಂಜುನಾಥ್ ಎನ್. ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಃಇತಿ ನೀಡಿದ್ದಾರೆ. ನಿನ್ನೆ ಕಾರ್ಯಾಚರಣೆ ವೇಳೆ ಸುಮಾರು 2.5 ಅಡಿ ಆಳದಲ್ಲಿ ಕೆಂಪು ಬಣ್ಣದ ರವಿಕೆ, ಪಾನ್ ಕಾರ್ಡ್ ಹಾಗೂ ಎಟಿಎಂ ಕಾರ್ಡ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಈ ಬೆಳವಣಿಗೆ ತನಿಖೆಗೆ ಹೊಸ ಆಯಾಮ ನೀಡಿದೆ ಎಂದು ಅವರು ಹೇಳಿದ್ದಾರೆ.
ಈ ಬೆಳವಣಿಗೆಯ ನಂತರವೇ ಎಸ್ ಐಟಿ ಅಧಿಕಾರಿಗಳು 10 ಅಡಿ ಆಳದವರೆಗೆ ಉತ್ಖನನ ಕಾರ್ಯಾಚರಣೆಯನ್ನು ಮುಂದುವರಿಸಲು ನಿರ್ಧಾರ ತೆಗೆದುಕೊಂಡರು ಎಂದಿರುವ ಅವರು ಎಸ್ ಐಟಿಯ ಕಾರ್ಯ ವೈಖರಿಯನ್ನು ಶ್ಲಾಘಿಸಿದ್ದಾರೆ.
ಪಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್ ನಲ್ಲಿ ಒಂದರ ಮೇಲೆ ಪುರುಷನ ಹೆಸರು ಮತ್ತು ಲಕ್ಷ್ಮೀ ಎಂಬ ಹೆಸರು ಕಂಡು ಬಂದಿದೆ. ಈ ಸುಳಿವು ವಿಚಾರಣೆಗೆ ಹೊರ ದಿಕ್ಕು ನೀಡಬಹುದು, ಅಧಿಕಾರಿಗಳು ಈ ಸುಳಿವನ್ನು ಬೆನ್ನತ್ತಿ ಹೋಗುವ ಭರವಸೆ ಇದೆ ಅಂತ ಅವರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD