ಧರ್ಮಸ್ಥಳ ಪ್ರಕರಣ: ಸುಳ್ಳು ಸುದ್ದಿಹರಡಿದರೆ ಕ್ರಮ: ಡಾ.ಜಿ.ಪರಮೇಶ್ವರ್ - Mahanayaka
1:43 AM Sunday 28 - September 2025

ಧರ್ಮಸ್ಥಳ ಪ್ರಕರಣ: ಸುಳ್ಳು ಸುದ್ದಿಹರಡಿದರೆ ಕ್ರಮ: ಡಾ.ಜಿ.ಪರಮೇಶ್ವರ್

parameshwar
01/08/2025

ಬೆಂಗಳೂರು:  ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.


Provided by

ಡಿಜಿಟಲ್‌ ಮಾಧ್ಯಮದಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಊಹಾಪೋಹಗಳನ್ನು ಹರಡಲಾಗುತ್ತಿದ ಎನ್ನುವ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್‌ ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧ ಇಲ್ಲದ ಇರುವ ಇಲ್ಲಸಲ್ಲದ ಪೋಸ್ಟ್‌ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಹೇಟ್‌ ಸ್ಪೀಚ್‌ ಬಗ್ಗೆ ಕಾನೂನು ಮಾಡಿದ ನಂತರ ದಕ್ಷಿಣ ಕನ್ನಡದಲ್ಲಿ ದ್ವೇಷ ಭಾಷಣದ ಈಗ ಕಡಿಮೆಯಾಗಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಾದರೂ ದ್ವೇಷದ ಪೋಸ್ಟ್‌ ಹಾಕಿದರೆ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ, ಕ್ರಮಕೈಗೊಳ್ತೇವೆ ಎಂದರು.

ಧರ್ಮಸ್ಥಳ ಪ್ರಕರಣ ತನಿಖೆ ನಡೆಯುತ್ತಿದೆ. ತನಿಖಾ ತಂಡ ವರದಿ ಸಲ್ಲಿಸುವವರೆಗೆ ನಾವು ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ