ಧರ್ಮಸ್ಥಳ ಪ್ರಕರಣ: ಸೋಮವಾರದ ಕಾರ್ಯಾಚರಣೆಯಲ್ಲಿ 3 ಕಳೇಬರ ಪತ್ತೆ! - Mahanayaka
3:15 AM Monday 29 - September 2025

ಧರ್ಮಸ್ಥಳ ಪ್ರಕರಣ: ಸೋಮವಾರದ ಕಾರ್ಯಾಚರಣೆಯಲ್ಲಿ 3 ಕಳೇಬರ ಪತ್ತೆ!

dharmasthala
05/08/2025

ಮಂಗಳೂರು: ಧರ್ಮಸ್ಥಳದಲ್ಲಿ ಎಸ್ ಐಟಿ ಅಧಿಕಾರಿಗಳು ಕಳೇಬರ ಹೊರ ತೆಗೆಯುವ ಕಾರ್ಯ ಮುಂದುವರಿಸಿದ್ದಾರೆ. ಈ ನಡುವೆ ಸೋಮವಾರ ಮಹತ್ವದ ಬೆಳವಣಿಗೆಯಾಗಿದ್ದು, 3 ಕಳೇಬರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.


Provided by

ದೂರುದಾರ ಸಾಕ್ಷಿ ಗುರುತಿಸಿದ 11ನೇ ಸ್ಥಳದಿಂದ 100 ಮೀಟರ್  ದೂರದ ಅರಣ್ಯ ಪ್ರದೇಶದಲ್ಲಿ  ಕನಿಷ್ಠ ಮೂರು ಕಳೇಬರ ಪತ್ತೆಯಾಗಿದೆ.  ಒಂದು ಕಳೇಬರ ಮಹಿಳೆಯದ್ದಾಗಿದ್ದು, ಸ್ಥಳದಲ್ಲಿ ಸೀರೆಯೂ ಪತ್ತೆಯಾಗಿದೆ ಎಂದು ಹೇಳಲಾಗಿದೆ.

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾದ ಅನನ್ಯಾ ಭಟ್ ತಾಯಿ ಸುಜಾತಾ ಭಟ್ ಪರ ವಕೀಲರಾದ ಮಂಜುನಾಥ್ ಎನ್. ಅವರು ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದು, ಸೋಮವಾರದ ಕಾರ್ಯಾಚರಣೆಯಲ್ಲಿ 3 ಕಳೇಬರ ಪತ್ತೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ