ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ: ಸ್ಥಳದಲ್ಲಿ ಉದ್ವಿಗ್ನ - Mahanayaka

ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ: ಸ್ಥಳದಲ್ಲಿ ಉದ್ವಿಗ್ನ

dharmastala
06/08/2025


Provided by

ಮಂಗಳೂರು: ಧರ್ಮಸ್ಥಳದಲ್ಲಿ ಎಸ್ ಐಟಿ ತನಿಖೆ ತೀವ್ರತೆ ಪಡೆಯುತ್ತಿರುವಂತೆಯೇ ಹೈಡ್ರಾಮವೇ ಆರಂಭವಾಗಿದ್ದು, ಧರ್ಮಸ್ಥಳ ಪ್ರಕರಣಗಳ ಬಗ್ಗೆ ನಿರಂತರ ವರದಿ ಮಾಡುತ್ತಿದ್ದ ಯೂಟ್ಯೂಬರ್ ಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ನೇತ್ರಾವತಿಯ ಪಾಂಗಳ ಕ್ರಾಸ್ ಬಳಿಯಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ಯುವಕರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.  ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ. ಯೂಟ್ಯೂಬರ್ ಗಳ ನಿರಂತರ ವರದಿಯನ್ನು ಹತ್ತಿಕ್ಕಲು ಯತ್ನ ನಡೆದಿದೆಯಾ ಎನ್ನುವ ಶಂಕೆ ವ್ಯಕ್ತವಾಗಿದೆ.  ಇನ್ನೂ ಕಲ್ಲು ತೂರಾಟದಿಂದಾಗಿ ಎರಡು ವಾಹನಗಳು ಜಖಂಗೊಂಡಿದೆ ಎಂದು ತಿಳೀದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ