ಟ್ರಂಪ್ ಗೆ  ಮೋದಿ ತಿರುಗೇಟು: ಭಾರತ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಂದೇಶ - Mahanayaka

ಟ್ರಂಪ್ ಗೆ  ಮೋದಿ ತಿರುಗೇಟು: ಭಾರತ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಂದೇಶ

modi trump
07/08/2025


Provided by

ನವದೆಹಲಿ:  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸುಂಕ ಸಮರವನ್ನು ಆರಂಭಿಸಿದ್ದಾರೆ. ಇದೀಗ ಈ ಸಂಬಂಧ ಮೌನ ಮುರಿದ ಪ್ರಧಾನಿ ಮೋದಿ, ಭಾರತ ತನ್ನ ರೈತರು ಮತ್ತು ಮೀನುಗಾರರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ, ರೈತರಿಗಾಗಿ ಯಾವುದೇ ಬೆಲೆ ತೆರಲು ಸಿದ್ಧ ಎಂದಿದ್ದಾರೆ.

ದೆಹಲಿಯಲ್ಲಿ ನಡೆದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತರರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ರೈತರ ಹಿತಾಸಕ್ತಿ ನಮ್ಮ ಪ್ರಮುಖ ಆದ್ಯತೆಯಾಗಿದೆ. ಭಾರತ ತನ್ನ ರೈತರು, ಜಾನುವಾರು ಮಾಲೀಕರು ಮತ್ತು ಮೀನುಗಾರರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಮತ್ತು ಇದಕ್ಕಾಗಿ ನಾನು ವೈಯಕ್ತಿಕವಾಗಿ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ನನಗೆ ತಿಳಿದಿದೆ, ಆದರೆ ನಾನು ಸಿದ್ಧನಿದ್ದೇನೆ ಎಂದಿದ್ದಾರೆ.

ದೇಶದ ರೈತರು, ಮೀನುಗಾರರು ಮತ್ತು ಜಾನುವಾರು ಮಾಲೀಕರ ಹಿತದೃಷ್ಟಿಯಿಂದ ಭಾರತ ಸಿದ್ಧವಾಗಿದೆ ಎಂದು ಟ್ರಂಪ್ ಅವರ ಸುಂಕಗಳು ಜಾರಿಗೆ ಬಂದ ಕೆಲವೇ ನಿಮಿಷಗಳ ನಂತರ ಪ್ರಧಾನಿ ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ