ಬಿಜೆಪಿ ಸಂಸದ ಸುಧಾಕರ್‌ ಹೆಸರು ಬರೆದಿಟ್ಟು ಡ್ರೈವರ್ ಸಾವಿಗೆ ಶರಣು! - Mahanayaka
4:12 AM Saturday 27 - September 2025

ಬಿಜೆಪಿ ಸಂಸದ ಸುಧಾಕರ್‌ ಹೆಸರು ಬರೆದಿಟ್ಟು ಡ್ರೈವರ್ ಸಾವಿಗೆ ಶರಣು!

sudhakar
07/08/2025

ಚಿಕ್ಕಬಳ್ಳಾಪುರ: ಮಾಜಿ ಸಚಿವ, ಬಿಜೆಪಿ ಸಂಸದ ಸುಧಾಕರ್‌ ಹೆಸರನ್ನು ಡೆತ್‌ ನೋಟ್‌ ನಲ್ಲಿ ಉಲ್ಲೇಖಿಸಿ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.


Provided by

ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನನ್ನ ಸಾವಿಗೆ ಸಂಸದ ಡಾ.ಕೆ.ಸುಧಾಕರ್ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಜಿಲ್ಲಾ ಪಂಚಾಯತಿ ಲೆಕ್ಕ ಸಹಾಯಕರ ವಿರುದ್ದವೂ ಡೆತ್‌ ನೋಟ್‌ ನಲ್ಲಿ ಬಾಬು ಹಲವು ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಇನ್ನೂ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ರಾಜಕೀಯ ಒತ್ತಡವಿಲ್ಲದೆ ತನಿಖೆ ಆಗಲಿದೆ ಎಂದು ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ ಸುಧಾಕರ್ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ