ಮತ್ತೊಂದು ಹುಲಿ ಸಾವು: ಕಾರಣ ಬಯಲು - Mahanayaka

ಮತ್ತೊಂದು ಹುಲಿ ಸಾವು: ಕಾರಣ ಬಯಲು

tiger
07/08/2025


Provided by

ಚಿಕ್ಕಮಗಳೂರು:  ರಾಜ್ಯದಲ್ಲಿ‌ ಮತ್ತೊಂದು ಹುಲಿ ಸಾವು ಪ್ರಕರಣ ನಡೆಸಿದ್ದು, ಭದ್ರಾ ಅಭಯಾರಣ್ಯದ ಹುಲಿ ಮೀಸಲು ಪ್ರದೇಶದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾದಾಟದಲ್ಲಿ ಹುಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಲಕ್ಕವಳ್ಳಿ ವಲಯದ ಕೂಟ್ ರಸ್ತೆಯಲ್ಲಿ ಹುಲಿಯ ಮೃತದೇಹ ಪತ್ತೆ‌ಯಾಗಿದೆ. ಅರಣ್ಯ ಸಿಬ್ಬಂದಿ  ಗಸ್ತು ತಿರುಗುತ್ತಿದ್ದ ವೇಳೆ  ಹುಲಿಯ ಕಳೆಬರಹ ಕಂಡು ಬಂದಿದೆ.

7 ವರ್ಷ ಪ್ರಾಯದ ಹೆಣ್ಣು ಹುಲಿ ಮೃತಪಟ್ಟಿದೆ. ಎರಡು ಹುಲಿಗಳ ಮಧ್ಯೆ ಕಾದಾಟದಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಮೃತಪಟ್ಟಿರುವ ಹುಲಿಯ ದೇಹದ ಮೇಲೆ ಕಾದಾಟ ನಡೆಸಿರುವ ಗಾಯದ ಗುರುತು ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ, ರಕ್ತ ಮಾದರಿ, ದೇಹದ ಕೆಲ ಭಾಗ ಪ್ರಯೋಗಲಕ್ಕೆ ರವಾನೆ ಮಾಡಲಾಗಿದೆ.  ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ