ನಟ ದರ್ಶನ್ ಮತ್ತೆ ಜೈಲಿಗೆ!: ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.
ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದ್ದು, ಜಾಮೀನು ರದ್ದುಗೊಳಿಸಿರುವ ಹಿನ್ನೆಲೆ ನಟ ದರ್ಶನ್ ಮತ್ತೆ ಜೈಲು ಸೇರಬೇಕಾಗಿದೆ.
ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಆರೋಪಿ ಎಷ್ಟೇ ದೊಡ್ಡವರಾದರೂ ಅವರು ಕಾನೂನಿಗಿಂತ ದೊಡ್ಡವರಲ್ಲ, ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್ನನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಕರ್ನಾಟಕ ಹೈಕೋರ್ಟ್ ಜಾಮೀನು ಕೊಡಲು ನೀಡಿದ ಕಾರಣಗಳ ಬಗ್ಗೆ ಬೇಸರ ಹೊರಹಾಕಿತ್ತು. ಈಗ ಸುಪ್ರೀಂ ತೀರ್ಪು ನೀಡಿದೆ. ದರ್ಶನ್ ಅವರಿಗೆ ಜಾಮೀನು ನೀಡಿದ್ದರ ಬಗ್ಗೆ ಈ ಮೊದಲು ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ಗೆ ಛೀಮಾರಿ ಹಾಕಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD