ಅನುಮಾನಾಸ್ಪದ ವಸ್ತು ಸ್ಫೋಟ: ಬಾಲಕ ಸಾವು, 6 ಮಂದಿಗೆ ಗಾಯ

ಬೆಂಗಳೂರು: ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಬಾಲಕನೊಬ್ಬ ಸಾವನ್ನಪ್ಪಿ 6 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ನಡೆದಿದೆ.
ಮುಬಾರಕ್(8) ಮೃತ ಬಾಲಕ ಎಂದು ಗುರುತಿಸಲಾಗಿದ್ದು, ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟನೆಯಲ್ಲಿ ಕಸ್ತೂರಮ್ಮ(35), ಸರಸಮ್ಮ(50), ಶಬೀರನಾ ಬಾನು(35), ಸುಬ್ರಮಣಿ(62), ಶೇಖ್ ನಜೀದ್ ಉಲ್ಲಾ(37), 8 ವರ್ಷದ ಬಾಲಕಿ ಫಾತಿಮಾ ಸೇರಿ 12 ಜನರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಸಂಜಯ್ಗಾಂಧಿ ಮತ್ತು ಜಯನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿರುವ ಆಡುಗೋಡಿ ಠಾಣೆ ಪೊಲೀಸರು ಮೇಲ್ನೋಟಕ್ಕೆ ಸಿಲಿಂಡರ್ ಸ್ಟೋಟ ಸಂಭವಿಸಿರಬಹುದು ಎನ್ನತ್ತಿದ್ದಾರೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD