ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಸಹಿತ ವಿವಿಧೆಡೆ ಇಡಿ ದಾಳಿ: ಕೋಟ್ಯಂತರ ನಗದು, ಕೆ.ಜಿ. ಗಟ್ಟಲೆ ಚಿನ್ನ ಜಪ್ತಿ - Mahanayaka

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಸಹಿತ ವಿವಿಧೆಡೆ ಇಡಿ ದಾಳಿ: ಕೋಟ್ಯಂತರ ನಗದು, ಕೆ.ಜಿ. ಗಟ್ಟಲೆ ಚಿನ್ನ ಜಪ್ತಿ

15/08/2025


Provided by

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನಲ್ಲಿ ಹೊರಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಸಂಬಂಧಿಸಿದಂತೆ ದೇಶದ ವಿವಿಧಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಕೋಟ್ಯಂತರ ರೂಪಾಯಿ ನಗದು ಹಾಗೂ ಕೆ.ಜಿ.ಗಟ್ಟಲೆ ಚಿನ್ನ ವಶಕ್ಕೆ ಪಡೆದುಕೊಂಡಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಪ್ರಕರಣ ದಾಖಲಿಸಿಕೊಂಡಿದ್ದ ಇ.ಡಿ ಅಧಿಕಾರಿಗಳು ಕಳೆದ ಬುಧವಾರ ಹಾಗೂ ಗುರುವಾರ ಕಾರವಾರದಲ್ಲಿ ಶಾಸಕರ ನಿವಾಸ, ಗೋವಾ, ಮುಂಬೈ ಹಾಗೂ ದೆಹಲಿ ವಿವಿಧ ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದರು.

ಪರಿಶೀಲನೆ ವೇಳೆ ಅಕ್ರಮಕ್ಕೆ ಸಂಬಂಧಿಸಿದಂತೆ ದಾಖಲಾತಿಗಳು ದೊರೆತಿವೆ. ಇದಕ್ಕೆ ಪೂರಕವಾಗಿ ಇಮೇಲ್ ಮಾಡಿರುವುದು ಗೊತ್ತಾಗಿದೆ. ತಪಾಸಣೆ ವೇಳೆ 1.68 ಕೋಟಿ ನಗದು, 6.75 ಕೆ.ಜಿ ಮೌಲ್ಯದ ಚಿನ್ನದ ಬಿಸ್ಕತ್​ ಗಳು ಹಾಗೂ ಬ್ಯಾಂಕ್ ಖಾತೆಯಲ್ಲಿದ್ದ ಸುಮಾರು 14.13 ಕೋಟಿ ರೂ. ಹಣವನ್ನ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇ.ಡಿ ಅಧಿಕಾರಿಗಳು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ