ಲಾರಿಗೆ KSRTC ಬಸ್ ಡಿಕ್ಕಿ: ಲಾರಿ ಚಾಲಕ ಸಹಿತ ಇಬ್ಬರು ಸಾವು!

ನೆಲಮಂಗಲ: ಲಾರಿಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ ಸಂಚಾರಿ ಠಾಣೆ ವ್ಯಾಪ್ತಿಯ ಗುಂಡೇನಹಳ್ಳಿ ಬಳಿ ನಡೆದಿದೆ.
ಲಾರಿ ಚಾಲಕ ಸೀನಪ್ಪ (50), ನಜೀರ್ ಅಹ್ಮದ್ (36) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಲಾರಿಯಲ್ಲಿ ಮೇಕೆ ಕುರಿ ತುಂಬಿಕೊಂಡು ಮುಧೋಳದಿಂದ ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದ ವೇಳೆ ಲಾರಿ ಗುಂಡೇನಹಳ್ಳಿ ಬಳಿ ಪಂಚರ್ ಆಗಿತ್ತು. ಹೀಗಾಗಿ ಟಯರ್ ಬದಲಿಸುತ್ತಿದ್ದ ವೇಳೆ ಏಕಾಏಕಿ ಬಸ್ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ನಸುಕಿನ ಜಾವ 3:30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD