Heavy rain: ಕರಾವಳಿಯಲ್ಲಿ ಆ.18ರಂದು ರೆಡ್ ಅಲರ್ಟ್ ಘೋಷಣೆ

17/08/2025
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಶನಿವಾರವೂ ಉತ್ತಮ ಮಳೆಯಾಗಿದೆ. ಸುಳ್ಯ, ಸುಬ್ರಹ್ಮಣ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ ಮತ್ತು ಮಂಗಳೂರಿನಲ್ಲಿ ಉತ್ತಮ ಮಳೆಯಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಕರಾವಳಿಯಲ್ಲಿ ಆ.18ರಂದು ರೆಡ್ ಅಲರ್ಟ್ ಇರಲಿದೆ. ಹೀಗಾಗಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಆ.17, 19 ಹಾಗೂ 20ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಆ.21 ಮತ್ತು 22ರಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ.16ರಿಂದ 19ರವರೆಗೆ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಮುನ್ಸೂಚನೆ ಕೂಡ ನೀಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD