ಧೂತ ಎಂ.ಡಿ.ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು - Mahanayaka

ಧೂತ ಎಂ.ಡಿ.ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು

m d smeer
21/08/2025


Provided by

ಬೆಂಗಳೂರು: ಬಂಧನದ ಭೀತಿ ಎದುರಿಸುತ್ತಿದ್ದ ಯೂಟ್ಯೂಬರ್ ಎಂ.ಡಿ.ಸಮೀರ್ ಗೆ ಮಂಗಳೂರು ಸತ್ರ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ದೊರಕಿದೆ. ಈ ಮೂಲಕ ಬಂಧನದ ಭೀತಿಯಿಂದ ಎಂ.ಡಿ.ಸಮೀರ್ ಪಾರಾಗಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿರುವ ಅಪರಾಧ ಪ್ರಕರಣಗಳ ಬಗ್ಗೆ ಯೂಟ್ಯೂಬ್ ನಲ್ಲಿ ಎಂ.ಡಿ.ಸಮೀರ್ ಮಾಡಿದ್ದ ವಿಡಿಯೋವೊಂದಕ್ಕೆ ಸಂಬಂಧಿಸಿದಂತೆ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿತ್ತು. ಜುಲೈ 12ರಂದು ಸಮೀರ್ ವಿರುದ್ಧ ಸುಮೊಟೋ ಕೇಸ್ ದಾಖಲಿಸಲಾಗಿತ್ತು.

ಗುರುವಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ನನ್ನು ಬಂಧಿಸಲು ಬೆಂಗಳೂರಿಗೆ ಪೊಲೀಸರು ಆಗಮಿಸಿದ್ದರು. ಬನ್ನೇರುಘಟ್ಟ ಬಳಿಯ ಹುಲ್ಲಳ್ಳಿ ಬಳಿಯ ಸಮೀರ್ ಮನೆಗೆ  ಆಗಮಿಸಿದ ವೇಳೆ ಸಮೀರ್ ಮನೆಯಲ್ಲಿ ಇಲ್ಲ ಎನ್ನುವುದು ತಿಳಿದು ಬಂದಿತ್ತು.

ಎಂ.ಡಿ.ಸಮೀರ್ ಆ.19ರಂದು ದಕ್ಷಿಣ ಕನ್ನಡ ಜಿಲ್ಲೆ ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದೀಗ ಜಿಲ್ಲಾ ನ್ಯಾಯಾಲಯವು ಸಮೀರ್ ಅರ್ಜಿಯನ್ನು ಪರಿಗಣಿಸಿ ನಿರೀಕ್ಷಣಾ ಜಾಮೀನು ನೀಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ