ಧರ್ಮಸ್ಥಳ ಪ್ರಕರಣ: ದೂರುದಾರ ಅನಾಮಿಕನ ಬಂಧನ - Mahanayaka

ಧರ್ಮಸ್ಥಳ ಪ್ರಕರಣ: ದೂರುದಾರ ಅನಾಮಿಕನ ಬಂಧನ

dharmasthala
23/08/2025


Provided by

ಬೆಳ್ತಂಗಡಿ: ಶವಗಳನ್ನು ಹೂತುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಅನಾಮಿಕನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದು,  ಆತನ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆತಂದಿದ್ದಾರೆ.

ಆ.22ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು, ಆ.23ರಂದು ಬೆಳಗ್ಗೆ ಅನಾಮಿಕನನ್ನು ಬಂಧಿಸಿ 11 ಗಂಟೆಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ ಎನ್ನಲಾಗಿದೆ.

ಪೊಲೀಸರ ಮುಂದೆ ಸಾಕ್ಷಿ ದೂರುದಾರ ಹಲವಾರು ವಿಚಾರಗಳನ್ನು ತಿಳಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಎಸ್ ಐಟಿ ತಂಡ ಮತ್ತೆ ಹೆಚ್ಚಿನ ವಿಚಾರಣೆ ನಡೆಸುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಸದ್ಯ  ತನಿಖೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಮಾಹಿತಿಗಳನ್ನು ಎಸ್ ಐಟಿ ಅಧಿಕಾರಿಗಳು ನೀಡಿಲ್ಲ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ