ಮಾಸ್ಕ್ ಮ್ಯಾನ್ ಚಿನ್ನಯ್ಯ 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ

23/08/2025
ಮಂಗಳೂರು: ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ದೂರು ನೀಡಿದ್ದ ದೂರುದಾರ ಸಿ.ಎನ್.ಚಿನ್ನಯ್ಯನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ಒಪ್ಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.
ಇಂದು ಬೆಳಗ್ಗೆ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲು ಬೆಳ್ತಂಗಡಿಯ ಎಸ್ ಐಟಿ ಕಚೇರಿಗೆ ಕರೆತಂದಿದ್ದರು.
ಧರ್ಮಸ್ಥಳ, ಉಜಿರೆ, ಚಿನ್ನಯ್ಯನನ್ನು ಬೆಳ್ತಂಗಡಿ ಸುತ್ತಮುತ್ತ ಹಲವು ಕಡೆ ಕರೆದೊಯ್ದು ಸ್ಥಳ ಮಹಜರು ಕೂಡ ಮಾಡುವ ಸಾಧ್ಯತೆ ಇದೆ. ಆತ ಬುರುಡೆ ತಂದ ಜಾಗಕ್ಕೂ ಕರೆದುಕೊಂಡು ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD