ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು

23/08/2025
ಉಡುಪಿ: ಬಿ.ಎಲ್.ಸಂತೋಷ್ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆ ಬಂಧನಕ್ಕೊಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ, ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶಿಸಿತ್ತು. ವಿಚಾರಣೆ ನಂತರ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ಇದೀಗ ನ್ಯಾಯಾಲಯವು ಸೌಜನ್ಯಪರ ಹೋರಾಟಗಾರ, ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD