ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ: 11 ವರ್ಷದ ಬಾಲಕ ಸಾವು

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 11 ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೆ.ಆರ್.ಮಾರ್ಕೆಟ್ ಬಳಿ ನಡೆದಿದೆ.
ಶಬರೀಶ್(11) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ತನ್ನ ಕುಟುಂಬಸ್ಥರ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಶಬರೀಶ್ ನ ತಂದೆ ದಿಲೀಪ್ ಕುಮಾರ್ ಅವರು ದೇವಸ್ಥಾನವೊಂದರಲ್ಲಿ ಪೂಜಾರಿಯಾಗಿ ಕೆಲಸ ಮಾಡಿಕೊಂಡಿದ್ದರು. ಕುಟುಂಬ ಸಮೇತವಾಗಿ ಮಾರ್ಕೆಟ್ ಗೆ ಹೋಗುತ್ತಿದ್ದ ವೇಳೆ ಮುಂದಿದ್ದ ಬೈಕ್ ಗೆ ಬಸ್ ಡಿಕ್ಕಿಯಾಗಿದ್ದು, ಬೈಕ್ ನಲ್ಲಿದ್ದ ಶಬರೀಶ್ ಬಲಭಾಗಕ್ಕೆ ಬಿದ್ದ ಪರಿಣಾಮ ಸಾವನ್ನಪ್ಪಿದ್ದಾನೆಂದು ತಿಳಿದು ಬಂದಿದೆ.
ಇನ್ನೂ ಘಟನೆಗೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಹಲದೂರು ಗೇಟ್ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD