ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

28/08/2025
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ಎಸ್ ಐಟಿ ತನಿಖೆ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ ಎಸ್ ಐಟಿ ಕಚೇರಿಗೆ ಸೌಜನ್ಯ ತಾಯಿ ಕುಸುಮಾವತಿ ಭೇಟಿ ನೀಡಿ ದೂರು ನೀಡಿದ್ದಾರೆ.
ಸಾಕ್ಷಿ ದೂರುದಾರನಾಗಿರುವ ಚೆನ್ನಯ್ಯ ಯೂಟ್ಯೂಬರ್ಸ್ ಗೆ ನೀಡಿರುವ ಸಂದರ್ಶನದಲ್ಲಿ ಸೌಜನ್ಯ ಪ್ರಕರಣದ ಬಗ್ಗೆ ಹಲವು ಹೇಳಿಕೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ದೂರಿನಲ್ಲಿ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.
ಸೌಜನ್ಯ ತಾಯಿ ನೀಡಿದ ದೂರು ಸ್ವೀಕರಿಸಿದ ಅಧಿಕಾರಿಗಳು ದೂರು ಪರಿಶೀಲನೆ ನಡೆಸಿ, ಅಗತ್ಯ ಕ್ರಮಕೈಗೊಳ್ಳುವುದಾಗಿ ಹಿಂಬರಹ ನೀಡಿ ಕಳುಹಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD