ಆಟೋಗೆ KSRTC ಬಸ್ ಡಿಕ್ಕಿ: 6 ಮಂದಿ ಸಾವು

28/08/2025
ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕರ್ನಾಟಕ ಕೇರಳ ಗಡಿ ಪ್ರದೇಶ ತಲಪಾಡಿಯಲ್ಲಿ ನಡೆದಿದೆ.
ಗುರುವಾರ ಮಧ್ಯಾಹ್ನ 1:30ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ಆಟೋ ರಿಕ್ಷಾ ಕೆ.ಸಿ.ರೋಡ್ ನಿಂದ ತೆರಳುತ್ತಿತ್ತು ಎನ್ನಲಾಗಿದೆ. ಈ ನಡುವೆ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಆಟೋ ಚಾಲಕ ಹೈದರ್ ಅಲಿ (47), ಫರಂಗಿಪೇಟೆಯ ಅವ್ವಮ್ಮ, ಅಜ್ಜಿನಡ್ಕದ ಖತುಜಾ (60), ಹಸ್ನಾ, ನಫೀಸಾ (52), ಆಯೇಶಾ (19) ಎಂಬವರು ಮೃತಪಟ್ಟಿದ್ದಾರೆ. ಲಕ್ಷ್ಮೀ(61) ಹಾಗೂ ಸುರೇಂದ್ರ(39) ಎಂಬವರಿಗೆ ಗಾಯಗಳಾಗಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD