ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿಯ ಹಿರಿಯ ಮುಖಂಡನ ವಿರುದ್ಧ ಗಂಭೀರ ಆರೋಪ - Mahanayaka

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿಯ ಹಿರಿಯ ಮುಖಂಡನ ವಿರುದ್ಧ ಗಂಭೀರ ಆರೋಪ

c krishnakumar
28/08/2025

ಪಾಲಕ್ಕಾಡ್: ಕೇರಳ ಬಿಜೆಪಿ ನಾಯಕರೊಬ್ಬರ  ವಿರುದ್ಧ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಕೇಳಿ ಬಂದಿದ್ದು,  ಆದರೆ ಈ ಆರೋಪವನ್ನು ಬಿಜೆಪಿ ನಾಯಕ ತಳ್ಳಿ ಹಾಕಿದ್ದಾರೆ.

ಕೇರಳ ಬಿಜೆಪಿ ಮುಖಂಡ ಸಿ.ಕೃಷ್ಣಕುಮಾರ್ ವಿರುದ್ಧ ಈ ಗಂಭೀರ ಆರೋಪ ಕೇಳಿ ಬಂದಿದೆ. ಕೆಲವು ದಿನಗಳ ಹಿಂದೆ ಮಹಿಳೆಯೊಬ್ಬರು ಸಿ.ಕೃಷ್ಣಕುಮಾರ್ ವಿರುದ್ಧ  ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರಿಗೆ ದೂರು ನೀಡಿದ್ದು, ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಹಲವು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿತ್ತು.

ಮಾಧ್ಯಮದ ವರದಿಯ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಿ.ಕೃಷ್ಣಕುಮಾರ್,  ದೂರುದಾರ ಮಹಿಳೆ ನನ್ನ ಪತ್ನಿಯ ನಿಕಟ ಸಂಬಂಧಿಯಾಗಿದ್ದಾಳೆ. ಆಸ್ತಿ ವಿವಾದದ ಕಾರಣಕ್ಕೆ ತನ್ನ ಮೇಲೆ ಹಲವಾರು ವರ್ಷಗಳಿಂದ ಸುಳ್ಳ ಆರೋಪ ಮಾಡುತ್ತಿದ್ದಾಳೆ ಎಂದು ಆರೋಪಿಸಿದ್ದಾರೆ.

ಇತ್ತೀಚೆಗಷ್ಟೇ ಪಾಲಕ್ಕಾಡ್ ನ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿತ್ತು. ಹೀಗಾಗಿ ಅವರನ್ನು ಕಾಂಗ್ರೆಸ್ ಪಕ್ಷ ಅಮಾನತು ಮಾಡಿದೆ. ಇದೀಗ ಬಿಜೆಪಿಯ ಹಿರಿಯ ನಾಯಕರಾಗಿರುವ ಸಿ.ಕೃಷ್ಣಕುಮಾರ್  ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಸಿ.ಕೃಷ್ಣ ಕುಮಾರ್ ವಿರುದ್ಧ ಕ್ರಮಕೈಗೊಳ್ಳುವ ವಿಚಾರದಲ್ಲಿ ಬಿಜೆಪಿ ಇಕ್ಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ