ಎಸ್ ಐಟಿ ಕಚೇರಿಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ | ಬೆಳ್ತಂಗಡಿ ಠಾಣೆಗೆ ಲಾಯರ್ ಜಗದೀಶ್ ಹಾಜರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನಯ್ಯನಿಗೆ ಆಶ್ರಯ ನೀಡಿರುವ ಆರೋಪದಡಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
ಚೆನ್ನಯ್ಯನಿಗೆ ಆಶ್ರಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಎಸ್ ಐಟಿ ನೋಟೀಸ್ ನೀಡಿತ್ತು. ಆ.29ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಮಹೇಶ್ ಶೆಟ್ಟಿ ತಿಮರೋಡಿ ಎಸ್ ಐಟಿ ವಿಚಾರಣೆ ಎದುರಿಸಿದ್ದಾರೆ.
ವಕೀಲ ಜಗದೀಶ್ ವಿಚಾರಣೆಗೆ ಹಾಜರು:
ಇನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳದ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿರುವ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ಆ.29ರಂದು ವಕೀಲ ಜಗದೀಶ್ ಹಾಜರಾಗಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ ಕಾಡುತ್ತಿದ್ದು, ಇದರಿಂದ ಪೊಲೀಸ್ ಭದ್ರತೆ ನೀಡುವಂತೆ ಜಗದೀಶ್ ಮನವಿ ಮಾಡಿದ್ದರು. ಅಂತೆಯೇ ಇಬ್ಬರು ಪೊಲೀಸರ ಜೊತೆಗೆ 1:45ಕ್ಕೆ ತಮ್ಮ ವಕೀಲರ ಜೊತೆಗೆ ಜಗದೀಶ್ ಠಾಣೆಗೆ ಹಾಜರಾದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD