ಧಾರಾಕಾರ ಮಳೆ: ಚಿಕ್ಕಮಗಳೂರಿನ ಈ ತಾಲೂಕುಗಳ ಶಾಲೆಗಳಿಗೆ ರಜೆ - Mahanayaka

ಧಾರಾಕಾರ ಮಳೆ: ಚಿಕ್ಕಮಗಳೂರಿನ ಈ ತಾಲೂಕುಗಳ ಶಾಲೆಗಳಿಗೆ ರಜೆ

rain
29/08/2025


Provided by

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಆ.30ರಂದು ರಜೆ‌ ಘೋಷಣೆ ಮಾಡಲಾಗಿದೆ.

ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, N.R.ಪುರ ತಾಲೂಕು, ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ, ಅಂಬಳೆ, ವಸ್ತಾರೆ, ಆವತಿ ಹೋಬಳಿ ಹಾಗೂ ತರೀಕೆರೆ ತಾಲೂಕಿನ ಲಕ್ಕವಳ್ಳಿ ,ಲಿಂಗದಹಳ್ಳಿ ಹೋಬಳಿಗೆ   ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಮಾಡಿದ್ದಾರೆ.

ಮಲೆನಾಡು, ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಕ್ರಮಕೈಗೊಳ್ಳಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ