ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಡಾನ್ಸ್ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ!

ಚಿಕ್ಕಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭ್ರಮದಿಂದ ಡಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋಧಗೂರು ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮೀಪತಿ(40) ಮೃತಪಟ್ಟ ವ್ಯಕ್ತಿಯಾಗಿದ್ದು, ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಲಕ್ಷ್ಮೀ ಪತಿ ಸಂಭ್ರಮದಿಂದ ಡಾನ್ಸ್ ಮಾಡುತ್ತಿದ್ದರು. ಏಕಾಏಕಿ ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಲಕ್ಷ್ಮೀಪತಿ ಕೃಷಿಕರಾಗಿದ್ದರು ಎಂದು ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD