ಭೀಕರ ಭೂಕಂಪಕ್ಕೆ 800 ಮಂದಿ ಸಾವು, 2500 ಮಂದಿಗೆ ಗಾಯ: ಅಫ್ಘಾನಿಸ್ತಾನಕ್ಕೆ ನೆರವು ನೀಡಿದ ಭಾರತ - Mahanayaka
11:07 AM Tuesday 2 - September 2025

ಭೀಕರ ಭೂಕಂಪಕ್ಕೆ 800 ಮಂದಿ ಸಾವು, 2500 ಮಂದಿಗೆ ಗಾಯ: ಅಫ್ಘಾನಿಸ್ತಾನಕ್ಕೆ ನೆರವು ನೀಡಿದ ಭಾರತ

afghanistan earthquake
02/09/2025


Provided by

ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭಾರೀ ಭೂಕಂಪಕ್ಕೆ ಈವರೆಗೆ 800 ಮಂದಿ ಸಾವನ್ನಪ್ಪಿದ್ದು, ಸಂಕಷ್ಟದಲ್ಲಿರುವ ಅಫ್ಘಾನಿಸ್ತಾನಕ್ಕೆ ಭಾರತ ಅಗತ್ಯ ನೆರವು ನೀಡಲು ಮುಂದಾಗಿದೆ.

6.3 ತೀವ್ರತೆಯ ಭೂಕಂಪಕ್ಕೆ ಅಫ್ಘಾನಿಸ್ತಾನ ಮಾತ್ರವಲ್ಲದೇ ನೆರೆಯ ರಾಷ್ಟ್ರ ಪಾಕಿಸ್ತಾನವೂ ಬೆಚ್ಚಿ ಬಿದ್ದಿದೆ. ಅಫ್ಘಾನಿಸ್ತಾನದಲ್ಲಿ ಭೂಕಂಪದ ಪರಿಣಾಮ  2,500 ಮಂದಿ ಗಾಯಗೊಂಡಿದ್ದಾರೆ.

ಅಫ್ಘಾನಿಸ್ತಾನದ ಕಾಬೂಲ್ ಪ್ರದೇಶದಲ್ಲಿ ಭಾರತವು ನಿರಾಶ್ರಿತರಿಗೆ  1000 ಡೇರೆಗಳನ್ನು ತಲುಪಿಸಿದೆ. ಭಾರತೀಯ ಮಿಷನ್ 15 ಟನ್ ಆಹಾರ ಸಾಮಗ್ರಿಗಳನ್ನು ತಕ್ಷಣವೇ ಕಾಬೂಲ್‌ ನಿಂದ ಕುನಾರ್‌ ಗೆ ಸಾಗಿಸುತ್ತಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.

ಭಾನುವಾರ ಮಧ್ಯರಾತ್ರಿಯ ಮೊದಲು ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪಾಕಿಸ್ತಾನದ ಗಡಿಯಲ್ಲಿರುವ ಕುನಾರ್ ಪ್ರಾಂತ್ಯದಲ್ಲಿ ಅತ್ಯಂತ ಭೀಕರವಾದ ವಿನಾಶಕ್ಕೆ ಕಾರಣವಾಗಿದೆ. ಕುನಾರ್ ಪ್ರಾಂತ್ಯದಲ್ಲಿ ಮಾತ್ರ ಸುಮಾರು 800 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಹತ್ತಿರದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಅಫ್ಘಾನಿಸ್ತಾನದ ಭೂಕಂಪದ ಕೇಂದ್ರಬಿಂದು ಜಲಾಲಾಬಾದ್‌ ನಿಂದ ಸುಮಾರು 27 ಕಿಲೋಮೀಟರ್ ದೂರದಲ್ಲಿತ್ತು. ಭೂಕಂಪವು ಭೂಮಿಯ ಮೇಲ್ಮೈಯಿಂದ ಎಂಟು ಕಿಲೋಮೀಟರ್ ಕೆಳಗೆ ಆಳದಲ್ಲಿ ಸಂಭವಿಸಿದೆ ಎಂದು ಯುಎಸ್‌ ಜಿಎಸ್ ತಿಳಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ