ಶಿಖರ್ ಧವನ್ ಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ ಇಡಿ! - Mahanayaka
12:14 AM Saturday 6 - September 2025

ಶಿಖರ್ ಧವನ್ ಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ ಇಡಿ!

shikhar dhawan
04/09/2025

ನವದೆಹಲಿ: ಕಳೆದ ವರ್ಷವಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​ ವಿದಾಯ ಹೇಳಿದ್ದ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್  ಅವರಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದೆ.


Provided by

ಬೆಟ್ಟಿಂಗ್ ಆ್ಯಪ್ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಶಿಖರ್ ಧವನ್   ಅವರನ್ನು  ಜಾರಿ ನಿರ್ದೇಶನಾಲಯ ವಿಚಾರಣೆಗೆ ಕರೆದಿದೆ. ಶಿಖರ್ ಧವನ್ ಸೋಶಿಯಲ್ ಮೀಡಿಯಾದಲ್ಲಿ ಆನ್‌ ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್ 1xBet ನ ಪ್ರಚಾರ ಮಾಡಿದ್ದರು. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಲು ಶಿಖರ್ ಧವನ್ ಅವರನ್ನು ವಿಚಾರಣೆಗೆ ಕರೆಯಲಾಗಿದೆ.

ಶಿಖರ್ ಧವನ್​ ಮಾತ್ರವಲ್ಲದೇ ಈ ಹಿಂದೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ ಮತ್ತು ಹರ್ಭಜನ್ ಸಿಂಗ್ ಅವರು ಕೂಡ ಇಡಿ ವಿಚಾರಣೆಯನ್ನು ಎದುರಿಸಿದ್ದರು.

ಕಳೆದ ವರ್ಷದಿಂದ, ಅಕ್ರಮ ಬೆಟ್ಟಿಂಗ್ ಆ್ಯಪ್‌ ಗಳನ್ನು ಪ್ರಚಾರ ಮಾಡಿದ್ದಕ್ಕಾಗಿ ಅನೇಕ ಬಾಲಿವುಡ್ ಮತ್ತು ದಕ್ಷಿಣ ಭಾರತದ ಚಲನಚಿತ್ರ ನಟರು ಮತ್ತು ಕ್ರಿಕೆಟಿಗರು ತನಿಖೆಗೆ ಒಳಗಾಗಿದ್ದಾರೆ. ಈ ಪಟ್ಟಿಯಲ್ಲಿ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ಹರ್ಭಜನ್ ಸಿಂಗ್, ಊರ್ವಶಿ ರೌಟೇಲಾ ಮತ್ತು ಸುರೇಶ್ ರೈನಾ ಸೇರಿದ್ದಾರೆ. ಈಗ ಶಿಖರ್ ಧವನ್ ಅವರ ಹೆಸರೂ ಇದಕ್ಕೆ ಸೇರ್ಪಡೆಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ