ಈ ರೀತಿ ಮಾಡಿದ್ರೆ ನಾವ್ಯಾರೂ ಬರೋದಿಲ್ಲ: ಸೈಮಾ ಅವಾರ್ಡ್ ವೇದಿಕೆಯಲ್ಲಿ ದುನಿಯಾ ವಿಜಯ್ ಗರಂ

“ಸೈಮಾ ಪ್ರಶಸ್ತಿ 2025” ಸಮಾರಂಭ ದುಬೈನಲ್ಲಿ ಅದ್ದೂರಿಯಾಗಿ ನಡೆದಿದೆ. ಇದೇ ವೇಳೆ ಕಾರ್ಯಕ್ರಮದ ನಿರ್ವಹಣೆಯ ಬಗ್ಗೆ ದುನಿಯಾ ವಿಜಯ್ ವೇದಿಕೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಬಾರಿ ಕಾರ್ಯಕ್ರಮದ ಕೊನೆಯಲ್ಲಿ ಕನ್ನಡ ನಟರಿಗೆ ಪ್ರಶಸ್ತಿ ನೀಡಲಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಯಾರೂ ಇಲ್ಲದಿದ್ದಾಗ ಸ್ಟೇಜ್ ಗೆ ಕರೆದು ಕನ್ನಡಿಗರಿಗೆ ಅವಾರ್ಡ್ಸ್ ಕೊಡೊದು ಎಷ್ಟು ಸರಿ..? ಎಂದು ಅವರು ಪ್ರಶ್ನಿಸಿದ್ದಾರೆ. ಕನ್ನಡ ಮೇಲಿದೆ ಅದನ್ನ ಕೆಳಗಿಳಿಸೋ ಪ್ರಯತ್ನ. ಈ ರೀತಿ ಮಾಡಬೇಡಿ. ಹೀಗಾದ್ರೆ ಇನ್ಮುಂದೆ ನಾವ್ಯಾರು ಬರೋದಿಲ್ಲ ಎಂದಿದ್ದಾರೆ.
ಪ್ರತಿ ಬಾರಿ ಕನ್ನಡವನ್ನ ಕೆಳಗಿಳಿಸಿ ಬೇರೆ ಭಾಷೆಯ ಯಾವ ಸ್ಟಾರ್ ಗಳೂ ಇಲ್ಲದಿದ್ದಾಗ ನಮ್ಮನ್ನ ವೇದಿಕೆಗೆ ಕರೆಯೋದು ಯಾಕೆ? ಎಂದು ಹೇಳಿದ್ದಾರೆ. ದುನಿಯಾ ವಿಜಯ್ ಅವರ ಮಾತಿಗೆ ಕನ್ನಡಿಗರು ಸಹಮತ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD