ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನಿಗೆ ನ್ಯಾಯಾಂಗ ಬಂಧನ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರನಿಗೆ ಬೆಳ್ತಂಗಡಿಯ ಜೆಎಂಎಫ್ ಸಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆತನನ್ನು ಶಿವಮೊಗ್ಗ ಜೈಲಿಗೆ ಕಳುಹಿಸಲಾಗಿದೆ.
ಪ್ರಕರಣದ ಸಾಕ್ಷಿ ದೂರುದಾರ ತಾನು ಹೂತುಹಾಕಿದ್ದ ಮೃತದೇಹವೊಂದರ ಬುರುಡೆ ಎಂದು ಹೇಳಿ ಮನುಷ್ಯನ ತಲೆಬುರುಡೆಯೊಂದನ್ನು ಒಪ್ಪಿಸಿದ್ದ. ನಂತರ ವಿಚಾರಣೆ ವೇಳೆ ಆ ತಲೆಬುರುಡೆ ನಾನು ಹೂತು ಹಾಕಿದ್ದ ಮೃತದೇಹದ್ದಲ್ಲ’ ಎಂದು ಒಪ್ಪಿಕೊಂಡಿದ್ದ ಎಂದು ಹೇಳಲಾಗಿದೆ.
ಆತನನ್ನು ವಿಶೇಷ ತನಿಖಾ ತಂಡದ (ಎಸ್ ಐಟಿ) ಅಧಿಕಾರಿಗಳು ಬಂಧಿಸಿ, ಅ.23ರಂದು ಬೆಳ್ತಂಗಡಿಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆತನಿಗೆ ಸೆ.3ರವರೆಗೆ ಎಸ್ ಐಟಿ ವಶಕ್ಕೆ ಒಪ್ಪಿಸಿದ್ದ ನ್ಯಾಯಾಲಯ, ನಂತರ ಆತನ ಎಸ್ ಐಟಿ ಕಸ್ಟಡಿಯ ಅವಧಿಯನ್ನು ಸೆ. 6ರವರೆಗೆ ವಿಸ್ತರಿಸಿತ್ತು.
ಎಸ್ ಐಟಿ ಅಧಿಕಾರಿಗಳು ಸಾಕ್ಷಿದೂರುದಾರನನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD