ಬಂಗ್ಲಗುಡ್ಡೆಯಲ್ಲಿ ಮತ್ತೆ ಎಸ್ ಐಟಿ ಕಾರ್ಯಾಚರಣೆ ಆರಂಭ: ಹೊರ ಬರುತ್ತಾ ಸತ್ಯ!?

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಹಲವಾರು ಮೃತದೇಹಗಳಿವೆ ಎನ್ನುವ ಹೇಳಿಕೆ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯ 12 ಎಕರೆ ವ್ಯಾಪ್ತಿಯ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಲು ಎಸ್ ಐಟಿ ಮುಂದಾಗಿದ್ದು, ಇಂದಿನಿಂದ ಕಾರ್ಯಾಚರಣೆ ಆರಂಭಗೊಂಡಿದೆ.
ಸಾಕ್ಷಿ ದೂರುದಾರ ಚಿನ್ನಯ್ಯ ಇದೇ ಸ್ಥಳದಿಂದ ತಲೆಬುರುಡೆ ತಂದಿದ್ದ ಎನ್ನುವುದು ತನಿಖೆಯಲ್ಲಿ ಬಯಲಾದ ಹಿನ್ನೆಲೆ ಇದೀಗ ಬಂಗ್ಲಗುಡ್ಡೆಯಲ್ಲಿ ಮತ್ತೊಂದು ಸಾಹಸಕ್ಕೆ ಎಸ್ ಐಟಿ ಅಧಿಕಾರಿಗಳು ಕೈ ಹಾಕಿದ್ದು, ಸುಮಾರು 12 ಎಕರೆ ಅರಣ್ಯ ಪ್ರದೇಶದಲ್ಲಿ ಪರಿಶೀಲನೆ ನಡೆಸಲು ಎಸ್ ಐಟಿ ಅಧಿಕಾರಿಗಳು ಮುಂದಾಗಿದ್ದಾರೆ ಅಂತ ಹೇಳಲಾಗಿದೆ.
ಎಸ್ ಐಟಿ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಸೈಮನ್ ಹಾಗೂ ಇತರ ಅಧಿಕಾರಿಗಳ ಜೊತೆಗೆ ಅರಣ್ಯ ಇಲಾಖೆ. ಲೋಕೋಪಯೋಗಿ ಇಲಾಖೆ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧಿಕಾರಿಗಳು. ಎಫ್ ಎಸ್ ಎಲ್ ವಿಭಾಗದ ಸೋಕೋ ತಂಡ ಕಾರ್ಯಾಚರಣೆ ಆರಂಭಿಸಿದೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD