ನಾಯಿಯನ್ನು ರಕ್ಷಿಸಲು ಹೋದ ಚಾಲಕ: ಬಸ್ ಪಲ್ಟಿಯಾಗಿ 8 ಮಂದಿಗೆ ಗಾಯ, ಓರ್ವನಿಗೆ ಗಂಭೀರ ಗಾಯ - Mahanayaka
7:16 AM Saturday 22 - November 2025

ನಾಯಿಯನ್ನು ರಕ್ಷಿಸಲು ಹೋದ ಚಾಲಕ: ಬಸ್ ಪಲ್ಟಿಯಾಗಿ 8 ಮಂದಿಗೆ ಗಾಯ, ಓರ್ವನಿಗೆ ಗಂಭೀರ ಗಾಯ

bus accident rayichuru
26/09/2025

ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು 8 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ಸಂಭವಿಸಿದೆ.

ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಬಸ್ ಇದಾಗಿದೆ. ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ಬಸ್​ ಅನ್ನು ಎಡಕ್ಕೆ ತಿರುಗಿಸಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ ಎಂದು ಹೇಳಲಾಗುತ್ತಿದೆ. ಬಸ್ಸಿನಲ್ಲಿ ಚಾಲಕ, ನಿರ್ವಾಹಕ ಸೇರಿ 16 ಜನರಿದ್ದರು.

ಬಸ್ ಪಲ್ಟಿಯಿಂದ ಬಸ್ ​ನಲ್ಲಿ ಓರ್ವ ಪ್ರಯಾಣಿಕನ ಕಾಲು ಸಿಲುಕಿ ಒದ್ದಾಡಿದ್ದಾನೆ. ಪೊಲೀಸರು, ಸ್ಥಳೀಯರ ಸಹಾಯದಿಂದ ಪ್ರಯಾಣಿಕನನ್ನು ಹೊರತೆಗೆದು ಆಂಬ್ಯುಲೆನ್ಸ್ ಮೂಲಕ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ.

ಅಲ್ಲದೇ‌ ಬಸ್‌ ನಲ್ಲಿದ್ದ ಸುಮಾರು 8 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ