ತೆಂಗಿನಮರದ ಸುಳಿ ತಿನ್ನಲು ಬಂದಿದ್ದ ಕಾಡಾನೆ ವಿದ್ಯುತ್ ಸ್ಪರ್ಶಿಸಿ ಸಾವು! - Mahanayaka

ತೆಂಗಿನಮರದ ಸುಳಿ ತಿನ್ನಲು ಬಂದಿದ್ದ ಕಾಡಾನೆ ವಿದ್ಯುತ್ ಸ್ಪರ್ಶಿಸಿ ಸಾವು!

04/10/2025

ರಾಮನಗರ:  ಕಾಡಾನೆಯೊಂದು ವಿದ್ಯುತ್ ಸ್ಪರ್ಶಿಸಿ  ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಚಿಕ್ಕವಿಠಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.


Provided by

ಶುಕ್ರವಾರ ರಾತ್ರಿ ಜಮೀನೊಂದರಲ್ಲಿ ತೆಂಗಿನಮರದ ಸುಳಿಯನ್ನು ಕಿತ್ತು ತಿನ್ನಲು‌ ಯತ್ನಿಸಿದಾಗ ತೆಂಗಿನ‌ ಮರ‌ದ‌ ಗರಿ 11 ಕೆವಿ ವಿದ್ಯುತ್ ತಂತಿಗೆ ತಗುಲಿದ್ದರಿಂದ‌ ಸ್ಥಳದಲ್ಲೇ ಕಾಡಾನೆ‌ ಸಾವಿಗೀಡಾಗಿದೆ.

ಸುಮಾರು 40 ವರ್ಷದ ಹೆಣ್ಣು ಆನೆಯಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಮಕೃಷ್ಣಪ್ಪ ಸಾಗರ್ ತಿಳಿಸಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಪಶು ವೈದ್ಯರನ್ನು ಸ್ಥಳಕ್ಕೆ ಕರೆಸಿ‌ ಮೃತ ಆನೆಯ ಮರಣೋತ್ತರ ‌ಪರೀಕ್ಷೆ ನಡೆಸಲಾಯಿತು. ಚಾಮರಾಜನಗರ ಜಿಲ್ಲೆಯ ಮಲೆ ಮಾದೇಶ್ವರ ಬೆಟ್ಟದಲ್ಲಿ ಹುಲಿ ಮೃತಪಟ್ಟ ಒಂದು ದಿನದ ನಂತರ ಈ ಘಟನೆ ಸಂಭವಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ