ಬಿಗ್ ಬಾಸ್ ಗೆ ಬೀಗ: ತಾತ್ಕಾಲಿಕ ಅನುಮತಿಗಾಗಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ ಜಾಲಿವುಡ್ ಸ್ಟುಡಿಯೋ

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೆಟ್ ನಿರ್ಮಾಣವಾಗಿದ್ದ ಜಾಲಿವುಡ್ ಸ್ಟುಡಿಯೋಕ್ಕೆ ನಿನ್ನೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಈ ಹಿನ್ನೆಲೆ ಜಾಲಿವುಡ್ ಸ್ಟುಡಿಯೋಸ್ ನ ಮಾತೃ ಸಂಸ್ಥೆ ವೇಲ್ಸ್ ಸ್ಟುಡಿಯೋಸ್ ನವರು ತಾತ್ಕಾಲಿಕ ಅನುಮತಿ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ನಾವು ಪರವಾನಗಿ ಪಡೆದು ಸ್ಟುಡಿಯೋ ನಡೆಸುತ್ತಿದ್ದೇವೆ. ನಮ್ಮ ಸ್ಟುಡಿಯೋನಲ್ಲಿನ ಎಲ್ಲ ಚಟುವಟಿಕೆಗಳಿಗೆ ಪರವಾನಗಿ ಇದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಇಲಾಖೆಯ ಕೆಲವು ನಿಯಮಗಳನ್ನು ನಾವು ಸರಿಯಾಗಿ ಪಾಲಿಸಿಲ್ಲ, ಈ ಬಗ್ಗೆ ನಾವು ವಿಷಾಧ ವ್ಯಕ್ತಪಡಿಸುತ್ತೇವೆ. ಇನ್ನು ಮುಂದೆ ನಾವು ಕೆಎಸ್ ಪಿಬಿಯ ಎಲ್ಲ ನಿಯಮಗಳನ್ನು ನಾವು ಪಾಲಿಸುತ್ತೇವೆ, ಅದಕ್ಕೆ ಸಂಬಂಧಿಸಿರುವ ದಾಖಲೆಗಳನ್ನು ನಾವು ಕೆಎಸ್ ಪಿಬಿಗೆ ಸಲ್ಲಿಕೆ ಮಾಡುತ್ತೇವೆ. ನಮಗೆ 15 ದಿನಗಳ ಕಾಲಾವಕಾಶ ನೀಡಿ ಅಷ್ಟರಲ್ಲಿ ಎಲ್ಲವನ್ನು ಸರಿಪಡಿಸುತ್ತೇವೆ, ಸದ್ಯಕ್ಕೆ ನಮಗೆ ತಾತ್ಕಾಲಿಕ ಅನುಮತಿಯನ್ನು ನೀಡಿ, ಆ ನಂತರ ಪರಿಶೀಲನೆ ನಡೆಸಿ ಅನುಮತಿಯನ್ನು ನವೀಕರಣಗೊಳಿಸಿ ಎಂದು ಪತ್ರದಲ್ಲಿ ವೇಲ್ಸ್ ಸ್ಟುಡಿಯೋ ಮನವಿ ಮಾಡಿದೆ.
ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಜಾಲಿವುಡ್ ಸ್ಟುಡಿಯೋಸ್ ನವರು ಪಾಲಿಸಿಲ್ಲವೆಂದು ಸ್ಥಳೀಯ ಆಡಳಿತಾಧಿಕಾರಿಗಳು ನಿನ್ನೆ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಿದ್ದಾರೆ. ಜಾಲಿವುಡ್ ಒಳಗಿದ್ದ ಬಿಗ್ ಬಾಸ್ ಕನ್ನಡ ಶೋ ಅನ್ನು ಸಹ ನಿಲ್ಲಿಸಲಾಗಿದ್ದು, ಸ್ಪರ್ಧಿಗಳನ್ನೆಲ್ಲ ಸ್ಥಳಾಂತರ ಮಾಡಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD