ಮೂಡಿಗೆರೆಯಲ್ಲಿ ಶ್ರೀಗಂಧ ಕಳ್ಳಸಾಗಣೆ: ಇಬ್ಬರ ಬಂಧನ

ಮೂಡಿಗೆರೆ: ಮೂಡಿಗೆರೆ ಪ್ರಾದೇಶಿಕ ವಲಯದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಅಕ್ರಮ ಶ್ರೀಗಂಧ ಕಳ್ಳಸಾಗಣೆ ಪತ್ತೆಯಾಗಿದೆ. ಅಕ್ಟೋಬರ್ 8ರಂದು ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಮೂಡಿಗೆರೆ ಶಾಖೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ, ಸುಜುಕಿ ಕಂಪನಿಯ ಬೈಕ್ (KA–18–ED–5486) ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಶ್ರೀಗಂಧ ಸಾಗಣೆ ಮಾಡುತ್ತಿದ್ದ ಯೂಸುಫ್ ಹಾಗೂ ಸ್ಥಳೀಯ ಪತ್ರಕರ್ತ ಮನ್ಸೂರ್ ಎಂಬುವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಿಶೇಷವೆಂದರೆ, ಆ ಬೈಕ್ ಮೇಲೆ “PRESS” ಎಂದು ಬರೆದು ಕಳ್ಳಸಾಗಣೆ ನಡೆಸಲಾಗುತ್ತಿತ್ತು ಎಂಬುದು ಪತ್ತೆಯಾಗಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕಾರ್ಯಾಚರಣೆಯನ್ನು ಸಹಾಯಕ ಸಂರಕ್ಷಣಾಧಿಕಾರಿ ಆಕರ್ಷ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದ್ದು, ವಲಯ ಅರಣ್ಯಾಧಿಕಾರಿ ಮಂಜುನಾಥ, ಉಪ ವಲಯ ಅರಣ್ಯಾಧಿಕಾರಿಗಳಾದ ಸುಹಾಸ್, ಅಶ್ವಥ್, ಹಾಗೂ ಅರಣ್ಯ ರಕ್ಷಕರಾದ ಉಮೇಶ್, ಸುರೇಶ್, ಮನು, ಸುಮ್ಮಂತ್ ಮುಂತಾದವರು ಭಾಗವಹಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD