ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು: ಹಲವರು ಅಸ್ವಸ್ಥ

ಬೆಂಗಳೂರು/ಪುತ್ತೂರು: ಸಿಎಂ ಸಿದ್ದರಾಮಯ್ಯ(Siddaramaiah)ನವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ‘ಅಶೋಕ ಜನಮನ’ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಯೋಗಿತ(20), ಸಭಾ ಮಾಡಾವು(20), ಆಮೀನಾ ಪಾಟ್ರಕೋಡಿ(56), ನೇತ್ರಾವತಿ ಇರ್ದೆ(37), ಲೀಲಾವತಿ ಕಡಬ(50), ವಸಂತಿ ಬಲ್ನಾಡ್ (53), ಕುಸುಮ( 62), ರತ್ನವತಿ ಪೆರಿಗೇರಿ (67), ಅಫೀಲಾ ಪಾಟ್ರಕೋಡಿ (20), ಸ್ನೇಹಪ್ರಭಾ (41) ಹಾಗೂ ಜಸೀಲಾ(30) ಎಂಬವರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಸ್ವಸ್ಥಗೊಂಡವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆದಿದ್ದು, ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಗಿದ್ದು, ಉಸಿರಾಡಲಾಗದೇ ಜನ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅಸ್ವಸ್ಥರನ್ನು ಪುತ್ತೂರು ತಾಲೂಕಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈದಾನದಲ್ಲಿ ಸರಿಯಾದ ವ್ಯವಸ್ಥೆ ಮಾಡಿಲ್ಲ ಎಂದು ಕಾರ್ಯಕ್ರಮ ಆಯೋಜಕರ ವಿರುದ್ಧ ಆಕ್ರೋಶ ಕೇಳಿ ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD