ಅಜ್ಜಿಗೆ ಫೋನ್ ಮಾಡಿದ್ದಕ್ಕೆ ಎಳೆಯ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಪಾಪಿ ಶಿಕ್ಷಕ!: ವೇದಾಧ್ಯಯನ ಶಾಲೆಯಲ್ಲಿ ಕ್ರೌರ್ಯ!

ಚಿತ್ರದುರ್ಗ: ವೇದಾಧ್ಯಯನ ಶಾಲೆಯ ಮುಖ್ಯ ಶಿಕ್ಷಕನೊಬ್ಬ 9 ವರ್ಷದ ಬಾಲಕನಿಗೆ ಹಿಗ್ಗಾಮುಗ್ಗ ಥಳಿಸಿ ಕಾಲಿನಿಂದ ಅಮಾನವೀಯವಾಗಿ ಒದ್ದು ಹಿಂಸಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಸದ್ಯ ಶಿಕ್ಷಕನ ವಿರುದ್ಧ ದೂರು ದಾಖಲಾಗಿದೆ.
ವರದಿಗಳ ಪ್ರಕಾರ ಈ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ವಸತಿ ಶಾಲೆಯಲ್ಲಿದಿದೆ. ಶಾಲೆಯ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ್ ಎಂಬಾತ ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿ ತರುಣ್ ಮೇಲೆ ಅಮಾನವೀಯ ಕೃತ್ಯ ನಡೆಸಿದ್ದಾನೆ.
ವಿದ್ಯಾರ್ಥಿ ತನ್ನ ಅಜ್ಜಿಗೆ ಬೇರೆ ನಂಬರ್ ನಿಂದ ಕರೆ ಮಾಡಿದನ್ನು ಪ್ರಶ್ನಿಸಿ, ಬಾಲಕನ ಕೈಯನ್ನು ತಿರುವಿ, ಕಾಲಿನಿಂದ ಮನಸೋ ಇಚ್ಛೆ ಒದ್ದು, ಬೆನ್ನಿಗೆ ಕೈಯಿಂದ ಗುದ್ದುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಶಿಕ್ಷಕ ಪರಾರಿಯಾಗಿದ್ದಾನೆ.
ಘಟನೆ ಸಂಬಂಧ ಗುರು ತಿಪ್ಪೇಸ್ವಾಮಿ ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರಪ್ಪ ಅವರು ನಾಯಕನಹಟ್ಟಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD