ರಸ್ತೆ ಗುಂಡಿಗಳ ಟ್ವೀಟ್ ಯುದ್ಧ ವಿರಾಮ:  ಸಿಎಂ, ಡಿಸಿಎಂನ್ನು ಭೇಟಿಯಾದ ಉದ್ಯಮಿಗಳು - Mahanayaka

ರಸ್ತೆ ಗುಂಡಿಗಳ ಟ್ವೀಟ್ ಯುದ್ಧ ವಿರಾಮ:  ಸಿಎಂ, ಡಿಸಿಎಂನ್ನು ಭೇಟಿಯಾದ ಉದ್ಯಮಿಗಳು

cm dcm
21/10/2025

ಬೆಂಗಳೂರು: ರಸ್ತೆ ಗುಂಡಿ ಸೇರಿದಂತೆ ಕಸದ ವಿಚಾರದಲ್ಲಿ  ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ನಲ್ಲಿ ಸಮರ ಸಾರಿದ್ದ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮತ್ತು ಮೋಹನ್‌ ದಾಸ್ ಪೈ ಸೇರಿದಂತೆ ಹಲವು ಉದ್ಯಮಿಗಳು ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.

ಬೆಂಗಳೂರಿನ ರಸ್ತೆಗುಂಡಿಗಳ ಬಗ್ಗೆ ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್ ಶಾ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೇ ಮೋಹನ್‌ ದಾಸ್‌ ಪೈ ಕೂಡ ರಸ್ತೆ ಗುಂಡಿ ಹಾಗೂ ಕಸದ ಸಮಸ್ಯೆಯನ್ನು ಪ್ರಶ್ನಿಸಿದ್ದರು.

ಉದ್ಯಮಿಗಳ ಭೇಟಿ ಬೆನ್ನಲ್ಲೇ ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಇಂದು ನನ್ನ ನಿವಾಸದಲ್ಲಿ ಉದ್ಯಮಿ ಮತ್ತು ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್ ಶಾ ಅವರನ್ನು ಭೇಟಿ ಮಾಡಿ ಸಂತೋಷವಾಯಿತು. ಬೆಂಗಳೂರು ಸೇರಿದಮತೆ ಕರ್ನಾಟಕದ ಬೆಳವಣಿಗೆಯ ಮುಂದಿನ ಹಾದಿ ಬಗ್ಗೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿರುವ ಕಿರಣ್‌ ಮಜುಂದಾರ್ ಶಾ, ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ